ನನ್ನ ಸರ್ಕಾರ ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಜಿಲ್ಲೆಯ ತುರುವೆಕೆರೆಯಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ
ನಶೆ ಮಾಫಿಯಾ ಪ್ರತಿ ಕ್ರಿಯೆ ನೀಡಿ,
ನಾನು ಸಿಎಂ ಆಗಿದ್ದಾಗ ಡ್ರಗ್ಸ್ ದಂಧೆಗೆ ಬ್ರೇಕ್ ಹಾಕಲು ಯತ್ನಿಸಿದ್ದೆ. ಈ ವೇಳೆ ಕೆಲವರು ಶ್ರೀಲಂಕಾಗೆ ಓಡಿ ಹೋದರು. ನನ್ನ ಸರ್ಕಾರ ಬೀಳಿಸೋಕೆ ಡ್ರಗ್ಸ್ , ಬೆಟ್ಟಿಂಗ್ ಹಣ ಬಳಕೆ ಆಯ್ತು ಎಂದು ಮೈತ್ರಿ ಸರ್ಕಾರ ಪತನಕ್ಕೆ ಡ್ರಗ್ ಮಾಫಿಯಾ ಕಾರಣ ಎಂಬ ಸ್ಫೋಟಕ ಮಾಹಿತಿ ಹೊರ ಹಾಕಿದ್ದಾರೆ.
ನನ್ನ ಸರ್ಕಾರ ಬೀಳಿಸೋಕೆ ಡ್ಯಾನ್ಸ್ ಬಾರ್ಗಳ ಹಣವನ್ನು ಬಳಕೆ ಮಾಡಿಕೊಂಡಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್, ಪಬ್ ಹಣ ಬಳಸಿ ಮೈತ್ರಿ ಸರ್ಕಾರ ಕೆಡವಿದ್ರು ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಇಂತಹ ಕೆಟ್ಟ ಮಾಫಿಯಾಗಳಿಗೆ ಚಿಕ್ಕ, ಚಿಕ್ಕ ಮಕ್ಕಳು ಬಲಿಯಾಗಬಾರದು. ಆದ್ದರಿಂದ ಇದರಲ್ಲಿ ಯಾವುದೇ ಮುಲಾಜಿಗೆ ಒಳಗಾಗದೆ, ಈ ಹಗರಣದ ಹಿಂದೆ ಯಾರೇ ಪ್ರಭಾವಿ ವ್ಯಕ್ತಿಗಳಿದ್ದರು ಅವರ ವಿರುದ್ಧ ಕಠಿಣ ಕ್ರಮ ಜರುಗಬೇಕು ಎಂದು ಹೆಚ್ ಡಿ ಕೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು